ಉತ್ತರ ಪ್ರದೇಶದ ಮದ್ರಸಾಗಳಿಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಯುಪಿಯಲ್ಲಿ ಮದರಸಾಗಳು ಕಾರ್ಯನಿರ್ವಹಿಸಬಹುದು, ಹೈಕೋರ್ಟ್ ತೀರ್ಪಿನಲ್ಲಿ ತಪ್ಪಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಉತ್ತರ ಪ್ರದೇಶದ ಮದರಸಾಗಳು ಕಾರ್ಯನಿರ್ವಹಿಸಬಹುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮದರಸಾ ಕಾನೂನನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.
ಉತ್ತರ ಪ್ರದೇಶದ 16,000 ಕ್ಕೂ ಅಧಿಕ ಮದರಸಾಗಳಿಗೆ ಇದರಿಂದ ರಿಲೀಫ್ ಸಿಕ್ಕಂತಾಗಿದ್ದು, ಸುಪ್ರೀಂ ಕೋರ್ಟ್ ಇಂದು ಅವುಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸುವ 2004 ರ ಕಾನೂನಿನ ಸಿಂಧುತ್ವವನ್ನು ಎತ್ತಿಹಿಡಿದಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಅಸಂವಿಧಾನಿಕ ಮತ್ತು ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಿತು. ಈ ಹಿಂದೆ ಔಪಚಾರಿಕ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮದ್ರಸಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿತ್ತು.