ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹು ನಿರೀಕ್ಷಿತ ‘ಮಾಫಿಯಾ’ ಚಿತ್ರದ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇದೇ ಜುಲೈ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಇತ್ತೀಚಿಗಷ್ಟೇ ಮಾಧ್ಯಮ ಒಂದರಲ್ಲಿ ತಿಳಿಸಿದೆ.
ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದು, ಶೈನ್ ಶೆಟ್ಟಿ, ವಾಸುಕಿ ವೈಭವ್, ಒರಟ ಪ್ರಶಾಂತ್, ಉಳಿದ ಪಾತ್ರವರ್ಗದಲ್ಲಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಬ್ಯಾನರ್ ನಲ್ಲಿ ಕುಮಾರ್ ಬಿ ನಿರ್ಮಾಣ ಮಾಡಿದ್ದು, ಸಿ ರವಿಚಂದ್ರನ್ ಸಂಕಲನ, ಪಂಡಿತ್ ಕುಮಾರ್ ಛಾಯಾಗ್ರಹಣ, ಮಾಸ್ತಿ ಸಂಭಾಷಣೆ, ವಿನೋದ್, ಡಿಫ್ರೆಂಟ್ ಡ್ಯಾನಿ, ಸತೀಶ್ ಹಾಗೂ ಜಾಲಿ ಬಾಸ್ಟಿಯನ್ ಅವರ ಸಾಹಸ ನಿರ್ದೇಶನವಿದೆ.