ಬೆಂಗಳೂರು: ಮಹದಾಯಿ ನದಿ ನೀರನ್ನು ಗೋವಾ ರಾಜ್ಯಕ್ಕೆ ಹರಿಸುವುದಾಗಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ನಿವಾಸದ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಗಳ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾದ ಪ್ರಣಾಳಿಕೆಯಲ್ಲಿ ಮಹದಾಯಿ ನೀರನ್ನು ಹರಿಸುವುದಾಗಿ ಭರವಸೆ ನೀಡಲಾಗಿದೆ. ಇದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು ಪ್ರತಿಭಟನಾನಿರತ ಕನ್ನಡ ಸಂಘಟನೆಗಳ ಕಾರ್ಯಕರ್ತರ ಮನವೊಲಿಸಿ ಕಳುಹಿಸಲು ಪ್ರಯತ್ನ ನಡೆಸಿದ್ದಾರೆ.