
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಿರುವಿನಲ್ಲಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಹನೂರು ತಾಲೂಕಿನ ಮಲೆ ಮಹೇಶ್ವರ ಬೆಟ್ಟದ ತಪ್ಪಲಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಚಲಾಯಿಸುತ್ತಿದ್ದ ಹರೀಶ್ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾನ್ಸ್ ಟೇಬಲ್ ವಿಜಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಎರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮೂರನೇ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ.
ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.