ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದ ಬಳಿ ಭಾರೀ ಮಳೆಗೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರೀ ಮಳೆಗೆ ಚರ್ಚ್‌ನ 4ನೇ ಗೇಟ್ ಬಳಿ ಗೋಡೆ ಕುಸಿದು ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದರು. ರಕ್ಷಣಾ ತಂಡಗಳು ಮತ್ತು ಪೊಲೀಸರು ತಕ್ಷಣವೇ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಐದು ವ್ಯಕ್ತಿಗಳನ್ನು ಅವಶೇಷಗಳಿಂದ ಹೊರತೆಗೆಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದೇವಸ್ಥಾನದಲ್ಲಿ ಸಂಜೆಯ ಆರತಿಗೆ ಮುನ್ನವೇ ಈ ಅವಘಡ ಸಂಭವಿಸಿದೆ. ಸತತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಘಢ ಉಂಟಾಗಿದೆ.