![](https://kannadadunia.com/wp-content/uploads/2025/02/kumbhamelsa-accident.jpg)
ಮಹಾಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ 6 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ 19 ಯಾತ್ರಿಕರು ಟಿಟಿ ವಾಹನದಲ್ಲಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಇಂದೋರ್ ಬಳಿ ಟಿಟಿ ವಾಹನ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೆಳಗಾವಿ ಮೂಲದ ನಾಲ್ವರು, ಇಂದೋರ್ ನ ಇಬ್ಬರು ಸೇರಿ 6 ಜನರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 16 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮುಂದೆ ಚಲಿಸುತ್ತಿದ್ದ ಟ್ಯಾಂಕರ್ ಗೆ ಟೆಂಫೋ ಟ್ರಾವೆಲರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಕೆಲ ದಿನಗಳ ಹಿಂದೆ ಕುಂಭಮೇಳದಲ್ಲಿ ಸಂಭವಿಸ ಕಾಲ್ತುಳಿತ ದುರಂತದಲ್ಲಿ ಬೆಳಗಾವಿಯ ನಾಲ್ವರು ಭಕ್ತರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.