![](https://kannadadunia.com/wp-content/uploads/2023/03/heart-attacks-banner-bg.jpg)
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ರಾಜ್ಯದ ವ್ಯಕಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಯಾಗ್ ರಾಜ್ ನಲ್ಲಿ ಪುಣ್ಯಸ್ನಾಸ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನಾಗರಾಜು (57) ಮೃತ ವ್ಯಕ್ತಿ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರು ಗ್ರಾಮದ ನಿವಾಸಿ.