![](https://kannadadunia.com/wp-content/uploads/2021/07/vijayendra-1568266643.jpg)
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮಹಾಕುಂಭಮೇಳದಲ್ಲಿ ಭಾಗವಹಿಸಲಿದ್ದಾರೆ.
ಕುಟುಂಬ ಸಮೇತರಾಗಿ ಅವರು ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ದೆಹಲಿಯಿಂದ ಇಂದು ವಿಜಯೇಂದ್ರ ಕುಟುಂಬದವರೊಂದಿಗೆ ಪ್ರಯಾಗ್ ರಾಜ್ ಗೆ ತೆರಳಲಿದ್ದು, ಕುಂಭಮೇಳದಲ್ಲಿ ಭಾಗವಹಿಸುವರು.
ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ದೇಶದ ಮೂಲೆ ಮೂಲೆಗಳಿಂದಲೂ ಮಾತ್ರವಲ್ಲದೆ ವಿದೇಶಗಳಿಂದಲೂ ಅಪಾರ ಸಂಖ್ಯೆಯ ಜನ ಆಗಮಿಸುತ್ತಿದ್ದಾರೆ. ಭಕ್ತರು, ಜನಸಾಮಾನ್ಯರು ಮಾತ್ರವಲ್ಲದೆ ಅನೇಕ ಗಣ್ಯರು ಕೂಡ ಕುಂಭಮೇಳದಲ್ಲಿ ಭಾಗವಹಿಸಿ ಪವಿತ್ರ ಸ್ನಾನ ಮಾಡಿದ್ದಾರೆ. ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ಕುಂಭಮೇಳದಲ್ಲಿ ಭಾಗವಹಿಸಿದ್ದರು.