ನಾಗ್ಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಜ್ಜ ಖರೀದಿಸುತ್ತಿದ್ದ ಬಲೂನ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ನಾಗ್ಪುರದಿಂದ 150 ಕಿ.ಮೀ ದೂರದಲ್ಲಿರುವ ಆಚಲ್‌ಪುರ ತಾಲೂಕಿನ ಶಿಂದಿ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಕೃಷಿ ಚಟುವಟಿಕೆ, ಎತ್ತುಗಳ ಮಹತ್ವ ತಿಳಿಸಲು ಆಚರಿಸಲಾದ ತನ್ಹಾ ಪೋಲಾ ಹಬ್ಬಕ್ಕೆ ಮಗು ತನ್ನ ಅಜ್ಜನೊಂದಿಗೆ ಹೋಗಿದ್ದಾಗ ಘಟನೆ ನಡೆದಿದೆ.
ಅಜ್ಜನೊಂದಿಗೆ ಮಗು ಬಲೂನ್ ಖರೀದಿಸುತ್ತಿದ್ದಾಗ ಗಾಳಿ ತುಂಬಲು ಬಳಸುವ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್‌ನ ಒಂದು ಭಾಗ ಆಕೆಯ ಕಾಲಿಗೆ ತಗುಲಿದ್ದರಿಂದ ಮಗು ಗಂಭೀರವಾಗಿ ಗಾಯಗೊಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕೆ ಸಾವನ್ನಪ್ಪಿದ್ದಾಳೆ. ಅಚಲಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.