alex Certify BREAKING: ಕೊರೋನಾ ಸೋಂಕಿನಿಂದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಗಾಂಧಿ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊರೋನಾ ಸೋಂಕಿನಿಂದ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಗಾಂಧಿ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ದಿಲೀಪ್ ಗಾಂಧಿ ಮಹಾರಾಷ್ಟ್ರ ಅಹ್ಮದ್‌ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದರು. ಅವರು 1999 ರಲ್ಲಿ ಮೊದಲ ಸಲ ಲೋಕಸಭೆಗೆ ಆಯ್ಕೆಯಾದರು. 2009 ಮತ್ತು 2014 ರಲ್ಲಿ ಕೂಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 2003-2004ರಲ್ಲಿ ಅವರು ಕೇಂದ್ರದಲ್ಲಿ ಹಡಗು ನಿರ್ಮಾಣದ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...