ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಂಬೈ, ಪುಣೆ ಸೇರಿದಂತೆ ಅನೇಕ ಮಹಾನಗರಗಳಲ್ಲಿ ಸೋಂಕು ನಿಯಂತ್ರಣಕ್ಕೆ ಸಿಗದಂತಾಗಿದೆ. ದಿನೇ ದಿನೇ ಹೊಸ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟುವ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಅಂತೆಯೇ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ ಸೋಂಕು ನಿಯಂತ್ರಣಕ್ಕೆ ಬರದಂತಾಗಿದೆ. ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.