ಮುಂಬೈ: ಲೋಕಸಭಾ ಚುನಾವಣೆಗೆ ಘೋಷಿಸಿದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬದಲಾವಣೆ ಮಾಡಿದೆ.
ಮಾರ್ಚ್ 28ರಂದು 8 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದರು. ಆದರೆ ನಾಲ್ಕೇ ದಿನಗಳಲ್ಲಿ ಅಭ್ಯರ್ಥಿಗಳನ್ನು ಬಿಜೆಪಿ ಬದಲಾವಣೆ ಮಾಡಿದೆ.
ಸರ್ವೆ ವರದಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. 6 ಹಾಲಿ ಸಂಸದರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ. ಸಿಎಂ ಏಕನಾಥ್ ಶಿಂಧೆ ಈ ನಿರ್ಧಾರಕ್ಕೆ ಟಿಕೆಟ್ ವಂಚಿತ ಸಂಸದರು ಗರಂ ಆಗಿದ್ದಾರೆ. ಮಹಾರಾಷ್ಟ್ರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.