ನಾಗ್ಪುರ: ಸರೋವರಕ್ಕೆ ಹಾರಿ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಒಂಬತ್ತು ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ತಹಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.
ಮೃತ ವ್ಯಕ್ತಿಯನ್ನು ಅಯೂಬ್ ಇಬ್ರಾಹಿಂ ಖಾನ್ ಎಂದು ಗುರುತಿಸಲಾಗಿದ್ದು, ಈತ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ತನ್ನ ಮಗಳಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬಾಲಕಿಯ ತಾಯಿಯೇ ಖಾನ್ ವಿರುದ್ಧ ಕೇಸ್ ದಾಖಲಿಸಿದ್ದರು.
ರಾಜಕೀಯ ದ್ವೇಷಕ್ಕೆ ಹೆಸರಾದ ಬಂಗಾಳದಲ್ಲಿ ಮತ್ತೊಂದು ಮರ್ಡರ್: ತಡರಾತ್ರಿ ಫೈರಿಂಗ್ ನಲ್ಲಿ ಟಿಎಂಸಿ ಮುಖಂಡನ ಹತ್ಯೆ
ತನ್ನ ವಿರುದ್ಧ ಪ್ರಕರಣ ದಾಖಲಿಸಿದರೆ ತನ್ನ ಜೀವನವನ್ನೇ ಕೊನೆಗಾಣಿಸುವುದಾಗಿ ಖಾನ್ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ. ಶುಕ್ರವಾರ ಗಾಂಧಿ ಸಾಗರ ಕೆರೆಗೆ ಹಾರಿ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾನೆ.
ಖಾನ್ ಮೃತದೇಹವನ್ನು ಹೊರತೆಗೆಯಲಾಗಿದ್ದು, ಬಳಿಕ ಆತನ ಕುಟುಂಬಸ್ಥರು ಗಣೇಶಪೇಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಆತನ ಮೇಲೆ ದೌರ್ಜನ್ಯ ಆರೋಪ ಹೊರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದುವೆಯಾಗುವ ವಧುಗೆ ಸ್ತನ, ಸೊಂಟ, ಪಾದದ ಅಳತೆ ಇಷ್ಟೇ ಇರಬೇಕೆಂದು ವಿಲಕ್ಷಣ ವೈವಾಹಿಕ ಜಾಹೀರಾತು ನೀಡಿದ ಭೂಪ
ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದ ಭೋಪಾಲ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ತನ್ನ ಮಗಳು ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡ ಆರೋಪಿ ಈ ಕೃತ್ಯ ಎಸಗಿದ್ದಾನೆ.
ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 376 (ಅತ್ಯಾಚಾರ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಆತನ ಮಗನನ್ನೂ ಪೊಲೀಸರು ಬಂಧಿಸಿದ್ದಾರೆ.