alex Certify BIG NEWS: ಹಬ್ಬದ ದಿನವೇ ದುರಂತ, ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್ – 5 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬದ ದಿನವೇ ದುರಂತ, ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್ – 5 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಾದ್ ಪಟ್ಟಣದ ಬಳಿ ಸೇತುವೆಯಿಂದ ಬಸ್ ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 8 ಮಂದಿ ಗಾಯಗೊಂಡಿದ್ದಾರೆ. ಗೋವಾ ಕಡೆಗೆ ತೆರಳುತ್ತಿದ್ದ ಬಸ್ ಉಂಬ್ರಾಜ್ ನಲ್ಲಿ ಅಪಘಾತಕ್ಕೀಡಾಗಿದೆ. ನವಿ ಮುಂಬೈ ವಾಶಿ ನಿವಾಸಿಗಳು ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಮ್ಬ್ರಾಜ್ ನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ 40 ಅಡಿ ಕೆಳಗೆ ನೀರಿಲ್ಲದ ನದಿಗೆ ಬಿದ್ದಿದೆ. ಚಾಲಕ ರಿಂಕು ಸಾಹು ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದು, ನಿಯಂತ್ರಣಕ್ಕೆ ಸಿಗದ ಬಸ್ ನದಿಗೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರನ್ನು ಉಷಾ ನಾಯರ್, ಮಧುಸೂದನ್ ನಾಯರ್, ಆದಿತ್ಯ ನಾಯರ್, ಸಜನ್ ನಾಯರ್, ಮತ್ತು ಅರವ್ ನಾಯರ್ ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಗಾಯಾಳುಗಳು ಕರಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...