alex Certify ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಸಿಎಂ ಯಡಿಯೂರಪ್ಪ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಸಿಎಂ ಯಡಿಯೂರಪ್ಪ ಆಕ್ರೋಶ

ಉಡುಪಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಸಿಎಂ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ಹೇಳಿಕೆ ಭಾರತದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯಾವುದೇ ಕಾರಣಕ್ಕೂ ರಾಜ್ಯದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಸಿಎಂ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿ ಅಂತಿಮವೆಂದು ಹೇಳಿದ್ದರೂ ಗಡಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೌಹಾರ್ದಯುತ ವಾತಾವರಣ ಕೆಡಿಸಿ ಅಶಾಂತಿ ಮೂಡಿಸಲು ಮಹಾರಾಷ್ಟ್ರ ಸಿಎಂ ಪ್ರಯತ್ನ ನಡೆಸಿದ್ದಾರೆ. ರಾಜ್ಯದಲ್ಲಿ ಮರಾಠಿಗರು, ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...