ನವದೆಹಲಿ: ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಅವರು, ಮೀಸಲು ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಹೇಳಿದ್ದಾರೆ. ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ಮೀಸಲಾತಿ ಗೊಂದಲ ಸೀಮಿತವಾಗಿಲ್ಲ. ಬಹುತೇಕ ರಾಜ್ಯಗಳು ಮೀಸಲಾತಿಗೆ ಸಂಬಂಧಿಸಿದ ಸಮಸ್ಯೆ ಎದುರಿಸುತ್ತಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.