ಥಾಣೆ: ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಗೊಂದಲ ಮುಂದುವರೆದಿದ್ದು, ಸಿಎಂ ಸ್ಥಾನಕ್ಕಾಗಿ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್ ನಡುವೆ ಹೈಡ್ರಾಮವೇ ನಡೆದಿದೆ ಎನ್ನಲಾಗಿದೆ. ಈ ನಡುವೆ ಹಂಗಾಮಿ ಸಿಎಂ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿದ್ದಾರೆ.
ಮಹಾರಾಷ್ಟ್ರದ ಥಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಏಕನಾಥ್ ಶಿಂಧೆ, ಮುಖ್ಯಮಂತ್ರಿ ಆಯ್ಕೆ ವಿಚಾರ ಬಿಜೆಪಿ ಹೈಕಮಾಂಡ್ ಗೆ ಬಿಟ್ಟಿದ್ದು. ನನಗೆ ಸಿಎಂ ಸ್ಥಾನದ ಆಸೆಯಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ನಾನು ಬದ್ಧ. ನಿನ್ನೆ ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದೆ. ಯಾವುದೇ ತೀರ್ಮಾನ ಕೈಗೊಂಡರೂ ಬದ್ಧ ಎಂದು ಹೇಳಿದ್ದೇನೆ. ಸರ್ಕಾರ ರಚಿಸಲು ಯಾವುದೇ ಸಮಸ್ಯೆಯಿಲ್ಲ. ಸಿಎಂ ಆಯ್ಕೆ ವಿಚಾರವಾಗಿ ಬಿಜೆಪಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ಜನರು ಮಹಾ ಅಘಾಡಿ ಪಕ್ಷವನ್ನು ತಿರಸ್ಕರಿಸಿದ್ದಾರೆ. ಮಹಾಯತಿ ಮೈತ್ರಿಗೆ ಜನರು ಆಶಿರ್ವಾದ ಮಾಡಿದ್ದಾರೆ. ಮಾಹಾಯತಿಯಿಂದ ಯಾರೇ ಸಿಎಂ ಆದರೂ ಸಹಕಾರ ನೀಡುತ್ತೇನೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಿಜೆಪಿ ಹೈಕಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.