
ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 20ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ತಿಳಿಸಿದರು.
ನವೆಂಬರ್ 20ರಂದು ಮಹಾತಾಷ್ಟ್ರದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.