ಮುಂಬೈ: ಹೊಸ ಯೋಜನೆಯಡಿ ಮಹಾರಾಷ್ಟ್ರ ರೈತರಿಗೆ ವಾರ್ಷಿಕ 6,000 ರೂ. ನೀಡಲಾಗುವುದು. ಮಹಾರಾಷ್ಟ್ರ ಸರ್ಕಾರ ಹೊಸ ಹಣಕಾಸು ಯೋಜನೆಯನ್ನು ಅನುಮೋದಿಸಿದೆ.
ಇದರ ಅಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು ರೈತರಿಗೆ ವಾರ್ಷಿಕ 6,000 ರೂಪಾಯಿಗಳನ್ನು ಪಾವತಿಸಲಾಗುವುದು. ನಿನ್ನೆ ಮುಂಬೈನಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಮೋ ಶೆಟ್ಕರಿ ಮಹಾಸನ್ಮಾನ್ ಯೋಜನೆಗೆ ಅನುಮೋದನೆ ನೀಡಲಾಯಿತು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಶಿಂಧೆ, ಈ ಮೊತ್ತವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಕೇಂದ್ರದಿಂದ ನೀಡುತ್ತಿರುವ 6,000 ರೂಪಾಯಿಗಳಿಗೆ ಹೆಚ್ಚುವರಿಯಾಗಿದೆ. ಮಹಾರಾಷ್ಟ್ರ ರೈತರಿಗೆ ವಾರ್ಷಿಕ 12 ಸಾವಿರ ರೂ. ಸಿಗಲಿದೆ ಎಂದು ತಿಳಿಸಿದ್ದಾರೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ‘ಆಯ್’ ಎಂಬ ‘ಲಿಂಗ ಅಂತರ್ಗತ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲು ಮಹಾರಾಷ್ಟ್ರ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಅದೇ ರೀತಿ, ರಾಜ್ಯದ ಕೆಲವು ಪ್ರವಾಸಿ ತಾಣಗಳಲ್ಲಿ ಮಹಿಳಾ ಬೈಕ್-ಟ್ಯಾಕ್ಸಿ ಸೇವೆಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಯಿತು.