
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು, ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ.
ನಾನ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಕಟ್ಟಡಕ್ಕೆ ವ್ಯಾಪಿಸಿದ್ದು, ಹೊರಬರಲಾರದೆ ನಾಲ್ವರು ರೋಗಿಗಳು ಮೃತಪಟ್ಟಿದ್ದಾರೆ. ಅಗ್ನಿ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.