
ಮುಂಬೈ: ಮಹಾರಾಷ್ಟ್ರದ ಪುಣೆ ನಗರದ ಉತ್ಪಾದನಾ ಘಟಕದಲ್ಲಿ ಇಂದು ವಾಹನದಿಂದ ಗಾಜು ಇಳಿಸುತ್ತಿದ್ದಾಗ ಗಾಜು ಸರಕು ಬಿದ್ದಿದ್ದರಿಂದ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.
ಕಾಟ್ರಾಜ್ ಪ್ರದೇಶದಲ್ಲಿರುವ ಗಾಜಿನ ಉತ್ಪಾದನಾ ಘಟಕದಲ್ಲಿ ಗಾಜಿನ ಸ್ಟಾಕ್ ಅನ್ನು ಇಳಿಸುವಾಗ ಐದರಿಂದ ಆರು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ನಮಗೆ ಕರೆ ಬಂದಿತು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡ ಐದು ಕಾರ್ಮಿಕರನ್ನು ಹೊರತೆಗೆದು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಸ್ಪತ್ರೆಯಲ್ಲಿ ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಸ್ಥಳದಲ್ಲಿದ್ದು, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.