ಮಹಾರಾಷ್ಟ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ-ಸರ್ಕಾರಿ ಕಚೇರಿಗಳಲ್ಲಿ ಮರಾಠಿ ಭಾಷೆಯ ಬಳಕೆಯನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದು, ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಮರಾಠಿಯಲ್ಲೇ ವ್ಯವಹರಿಸಬೇಕು ಎಂದು ಸೂಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳು, ಸರ್ಕಾರಿ ನಿಗಮಗಳು ಮತ್ತು ಸರ್ಕಾರಿ ನೆರವಿನ ಸಂಸ್ಥೆಗಳಿಗೂ ಈ ನಿಯಮ ಅನ್ವಯಿಸಲಿದೆ.
ಸರ್ಕಾರಿ ಆದೇಶ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ. ಕಳೆದ ವರ್ಷ ಅಂಗೀಕರಿಸಲಾದ ಮರಾಠಿ ಭಾಷಾ ನೀತಿಯು ಸಾರ್ವಜನಿಕ ವ್ಯವಹಾರಗಳಲ್ಲಿ ಮರಾಠಿ ಬಳಕೆಯನ್ನು ಶಿಫಾರಸು ಮಾಡಿತ್ತು. ಭಾಷೆಯ ಸಂರಕ್ಷಣೆ, ಪ್ರಚಾರ ಮತ್ತು ಅಭಿವೃದ್ಧಿಗೆ ಈ ಕ್ರಮ ಕೈಗೊಳ್ಳಲಾಗಿದೆ.
ಇದಲ್ಲದೆ, ಎಲ್ಲಾ ಕಚೇರಿಗಳ ಪಿಸಿ (ವೈಯಕ್ತಿಕ ಕಂಪ್ಯೂಟರ್) ಕೀಬೋರ್ಡ್‌ಗಳಲ್ಲಿ ರೋಮನ್ ಅಕ್ಷರಗಳ ಜೊತೆಗೆ ಮರಾಠಿ ದೇವನಾಗರಿ ಅಕ್ಷರಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.