ಈರುಳ್ಳಿ ಬೆಲೆಯಲ್ಲಿ ತೀವ್ರ ಕುಸಿತ ಕಂಡಿರುವ ಪರಿಣಾಮ ದೇಶದಲ್ಲಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಜರಾತ್ ಸರ್ಕಾರ ಈಗಾಗಲೇ ಅವರುಗಳ ನೆರವಿಗಾಗಿ ಪ್ಯಾಕೇಜ್ ಘೋಷಿಸಿದ್ದು, ಇದೀಗ ಮಹಾರಾಷ್ಟ್ರ ಸರ್ಕಾರ ಕೂಡ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಬೆಲೆ ಕುಸಿತದಿಂದಾಗಿ ನಷ್ಟ ಅನುಭವಿಸುತ್ತಿರುವ ಈರುಳ್ಳಿ ಬೆಳೆಗಾರರಿಗೆ ಪ್ರತಿ ಕ್ವಿಂಟಲ್ ಗೆ ರೂ.300 ಪರಿಹಾರ ಘೋಷಿಸಿದ್ದು, ಆದರೆ ಇದು ಅತ್ಯಂತ ಕಡಿಮೆಯಾಗಿದೆ ಎಂದು ರೈತರು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಅಖಿಲ ಭಾರತ ಕಿಸಾನ್ ಸಭಾ ಸೇರಿದಂತೆ ಇತರ ರೈತ ಸಂಘಟನೆಗಳ ನೇತೃತ್ವದಲ್ಲಿ ಈರುಳ್ಳಿ ಬೆಳೆಗಾರರು ಧರಣಿ ನಡೆಸುತ್ತಿದ್ದು, ಸೂಕ್ತ ಪರಿಹಾರ ನೀಡುವವರೆಗೂ ಇದನ್ನು ಮುಂದುವರಿಸಲಾಗುತ್ತದೆ ಎಂದು ಹೇಳಲಾಗಿದೆ.