
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಇಂಧನ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಲಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ
ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು(ವ್ಯಾಟ್) ಶೀಘ್ರದಲ್ಲೇ ಕಡಿಮೆ ಮಾಡುತ್ತದೆ ಎಂದು ಸೋಮವಾರ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಶಿಂಧೆ ಅವರು ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದ ನಂತರದಲ್ಲಿ ಚರ್ಚೆಯ ಮೇಲೆ ಉತ್ತರಿಸಿದರು.