alex Certify ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಹಾರಾಷ್ಟ್ರ ಜನತೆಗೆ ಭರ್ಜರಿ ಗಿಫ್ಟ್ ಘೋಷಿಸಿದ ನೂತನ ಸಿಎಂ ಶಿಂಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವಾಸಮತ ಗೆದ್ದ ಬೆನ್ನಲ್ಲೇ ಮಹಾರಾಷ್ಟ್ರ ಜನತೆಗೆ ಭರ್ಜರಿ ಗಿಫ್ಟ್ ಘೋಷಿಸಿದ ನೂತನ ಸಿಎಂ ಶಿಂಧೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ಬಹುಮತ ಸಾಬೀತುಪಡಿಸಿದ ಬೆನ್ನಲ್ಲೇ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಇಂಧನ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಲಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ

ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು(ವ್ಯಾಟ್) ಶೀಘ್ರದಲ್ಲೇ ಕಡಿಮೆ ಮಾಡುತ್ತದೆ ಎಂದು ಸೋಮವಾರ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟದಲ್ಲಿ ಇಂಧನದ ಮೇಲಿನ ವ್ಯಾಟ್ ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಶಿಂಧೆ ಅವರು ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದ ನಂತರದಲ್ಲಿ ಚರ್ಚೆಯ ಮೇಲೆ  ಉತ್ತರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...