ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಡಿಸೆಂಬರ್ 22 ರಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ರಾಜ್ಯದ ಮಹಾನಗರ ಪಾಲಿಕೆ ಪ್ರದೇಶಗಳ ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಸೆಂಬರ್ 22 ರಿಂದ ಅನ್ವಯವಾಗುವಂತೆ ನೈಟ್ ಕರ್ಫ್ಯೂ ಘೋಷಿಸಲಾಗಿದೆ.
ಮಹಾರಾಷ್ಟ್ರ ಸರ್ಕಾರ ಸೋಮವಾರ ನೈಟ್ ಕರ್ಫ್ಯೂ ಘೋಷಿಸಿದ್ದು, ಡಿಸೆಂಬರ್ 22 ರಿಂದ ಜನವರಿ 5 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ. ಕ್ರಿಸ್ಮಸ್, ಹೊಸ ವರ್ಷಾಚರಣೆ, ಇಂಗ್ಲೆಂಡ್ ನಲ್ಲಿ ಹೊಸ ಕೊರೋನಾ ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 5 ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎನ್ನಲಾಗಿದೆ.