ಗಡ್ ಚಿರೋಲಿ: ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯಲ್ಲಿ ಪೋಲಿಸರಿಂದ 26 ಮಾವೋವಾದಿ ನಕ್ಸಲರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಪಿ. ಅಂಕಿತ್ ಗೋಯೆಲ್ ಮುಖ್ಯ ಮಾಹಿತಿ ನೀಡಿದ್ದಾರೆ.
ನಮಗೆ 100 ನಕ್ಸಲರು ಸಭೆ ಸೇರಿರುವ ಮಾಹಿತಿ ದೊರೆತಿತ್ತು. ಖಚಿತ ಮಾಹಿತಿಯ ಮೇರೆಗೆ ನಕ್ಸಲರ ಗುಂಪಿನ ಮೇಲೆ ದಾಳಿ ನಡೆಸಲಾಗಿತ್ತು ಎಂದು ಮಹಾರಾಷ್ಟ್ರ ಪೊಲೀಸರು ನಡೆಸಿದ ಕಾರ್ಯಾಚರಣೆ ಕುರಿತಾಗಿ ಮಾಹಿತಿ ನೀಡಿದ್ದಾರೆ.
ನಿನ್ನೆ ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯಲ್ಲಿ ನಡೆಸಿದ ಎನ್ ಕೌಂಟರ್ ನಲ್ಲಿ 26 ಮಾವೋವಾದಿ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯ ಕುರಿತಾಗಿ ಎಸ್ಪಿ ಅಂಕಿತ್ ಗೋಯಲ್ ಮಾಹಿತಿ ನೀಡಿದ್ದು, ಆರು ಮಹಿಳೆಯರು 26 ಮಾವೋವಾದಿ ನಕ್ಸಲರನ್ನು ಹತ್ಯೆಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಧನೋರಾ ತಹಸಿಲ್ನ ಗ್ಯಾರಬಟ್ಟಿ ಅರಣ್ಯದಲ್ಲಿ ಎನ್ಕೌಂಟರ್ ನಡೆದಿದೆ. ಗುಪ್ತಚರ ಮಾಹಿತಿ ಅನುಸರಿಸಿ ಪೊಲೀಸರ ಕಮಾಂಡೋ ತಂಡವು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.