ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧೀರಜ್ ಪಾಟೀಲ್ (55) ಎಂಬ ಕಾರು ಚಾಲಕನಿಗೆ ಚಾಲನೆ ಮಾಡುವಾಗ ಹೃದಯಾಘಾತವಾಗಿದೆ.
ಇದರಿಂದ ನಿಯಂತ್ರಣ ತಪ್ಪಿದ ಕಾರು ಫ್ಲೈಓವರ್ ಬಳಿ ಹತ್ತಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಆಟೋರಿಕ್ಷಾ, ಕಾರು, ದ್ವಿಚಕ್ರ ವಾಹನ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ. ಈ ಘಟನೆಯಲ್ಲಿ ಧೀರಜ್ ಪಾಟೀಲ್ ಸಾವನ್ನಪ್ಪಿದ್ದಾರೆ.
ಧೀರಜ್ ಪಾಟೀಲ್ ಶನಿವಾರ ಮುಂಜಾನೆ ಕೆಲಸಕ್ಕೆ ಹೋಗುತ್ತಿದ್ದರು. ಫ್ಲೈಓವರ್ ಬಳಿ ಕಾರು ಚಲಾಯಿಸುವಾಗ ಅವರಿಗೆ ಹೃದಯಾಘಾತವಾಗಿದೆ. ಇದರಿಂದ ಕಾರಿನ ನಿಯಂತ್ರಣ ತಪ್ಪಿ ಹತ್ತಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಧೀರಜ್ ಪಾಟೀಲ್ ಅವರಿಗೆ ಚಾಲನೆ ಮಾಡುವಾಗಲೇ ಹೃದಯಾಘಾತವಾಗಿತ್ತು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Heart attack while driving…🙏
Kolhapur!
— Dave (Road Safety: City & Highways) (@motordave2) March 15, 2025