ಮಹಾರಾಷ್ಟ್ರದ ಲಾತೂರ್‌ನ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಶನಿವಾರ ಸಂಜೆ ಶೌಚಾಲಯಕ್ಕೆ ಭೇಟಿ ನೀಡಿದಾಗ ಎರಡು ದಿನದ ಹೆಣ್ಣು ಮಗುವಿನ ಶವವನ್ನು ನೋಡಿದ್ದಾರೆ. ಅಂಗವಿಕಲರ(ಪಿಡಬ್ಲ್ಯುಡಿ) ಕಮೋಡ್‌ನಲ್ಲಿ ಮೃತದೇಹವನ್ನು ಎಸೆಯಲಾಗಿತ್ತು ಎಂದು ವಿಲಾಸ್‌ರಾವ್ ದೇಶಮುಖ್ ಸರ್ಕಾರಿ ಆಸ್ಪತ್ರೆಯ ಡೀನ್ ಡಾ.ಉದಯ್ ಮೋಹಿತೆ ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.