
ಈ ಘಟನೆ ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದು, ಸುಧೀರ್ ಖರ್ಕಟೆ, ಯುವತಿ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯ ನಂತರ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ವರ್ಧಾದ ಸ್ಥಳೀಯ ನಿವಾಸಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕುಲಪತಿಗೆ ದೂರು ಸಲ್ಲಿಸಿದ್ದು, ಸುಧೀರ್ ಖರ್ಕಟೆಯನ್ನು ತಕ್ಷಣವೇ ಅಮಾನತು ಮಾಡುವಂತೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
View this post on Instagram