alex Certify BIG NEWS: ಮಹಿಳಾ ಪೇದೆಗಳ ಕರ್ತವ್ಯದ ಅವಧಿ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳಾ ಪೇದೆಗಳ ಕರ್ತವ್ಯದ ಅವಧಿ ಕಡಿತ

ಮಹಾರಾಷ್ಟ್ರ ಪೊಲೀಸರು ತಮ್ಮ ಮಹಿಳಾ ಪೇದೆಗಳ ಕೆಲಸದ ಅವಧಿಯನ್ನು 12 ಗಂಟೆಗಳಿಂದ 8 ಗಂಟೆಗೆ ಇಳಿಸಿದ್ದಾರೆ. ಮಹಿಳಾ ಸಿಬ್ಬಂದಿಯ ವೃತ್ತಿಪರ ಹಾಗೂ ವೈಯಕ್ತಿಕ ಜೀವನ ಸಮತೋಲನದಲ್ಲಿರಲಿ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಳಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಜ್ಯ ಪೊಲೀಸ್​ ಮಹಾನಿರ್ದೇಶಕ ಸಂಜಯ್​ ಪಾಂಡೆ ಈ ವಿಚಾರವಾಗಿ ಮಾತನಾಡಿದ್ದು ಪ್ರಾರಂಭಿಕ ಹಂತವಾಗಿ ಈ ಯೋಜನೆಯು ನಾಗ್ಪುರ, ಅಮರಾವತಿ ನಗರ ಹಾಗೂ ಪುಣೆ ಗ್ರಾಮಾಂತರದಲ್ಲಿ ಅನುಷ್ಠಾನಗೊಂಡಿದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳಿನಿಂದ ಈ ಉಪಕ್ರಮವು ಮೂರು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬಂದಿದೆ. ಕೆಲವೇ ದಿನಗಳಲ್ಲಿ ಇದು ರಾಜ್ಯದ ಇತರೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ ಎಂದು ಸಂಜಯ್​ ಪಾಂಡೆ ಹೇಳಿದರು.

ಕುಟುಂಬ ನಿರ್ವಹಣೆ ಹಾಗೂ ವೃತ್ತಿ ಪರ ಜೀವನಗಳಲ್ಲಿ ಮಹಿಳಾ ಪೇದೆಗಳಿಗೆ ಇರುವ ಬದ್ಧತೆಗಳನ್ನು ಗಮನದಲ್ಲಿರಿಸಿಕೊಂಡು ಈ ಉಪಕ್ರಮವನ್ನು ಕಳೆದ ತಿಂಗಳಿನಿಂದ ಆರಂಭಿಸಲಾಗಿದೆ. ಹಾಗೂ ಉತ್ತಮ ಫಲಿತಾಂಶವನ್ನು ಪಡೆಯುತ್ತಿದ್ದೇವೆ ಎಂದು ಪಾಂಡೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...