
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯವೆದ್ದ ಮತ್ತೊಬ್ಬ ಸಚಿವ ಏಕನಾಥ ಶಿಂಧೆ ಕ್ಯಾಂಪ್ ಸೇರಿಕೊಂಡಿದ್ದಾರೆ. ಈ ಮೂಲಕ ಬಂಡಾಯ ನಾಯಕ ಏಕನಾಥ ಶಿಂಧೆ ಬಣದಲ್ಲಿ 8 ಸಚಿವರು ಸೇರಿದಂತಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರದ ಶಿವಸೇನೆಯ 8 ಸಚಿವರು ಏಕನಾಥ್ ಶಿಂಧೆ ಬಣದಲ್ಲಿದ್ದಾರೆ. ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ ಸಮಂತ್ ಶಿವಸೇನೆಗೆ ಶಾಕ್ ನೀಡಿದ್ದಾರೆ. ಗುವಾಹಟಿಗೆ ಪ್ರಯಾಣ ಬೆಳೆಸಿದ್ದಾರೆ. ಶಾಸಕರೊಂದಿಗೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಏಕನಾಥ ಶಿಂಧೆ ಅಲ್ಲಿಂದಲೇ ಶಿವಸೇನೆಗೆ ಮೇಲೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ.