ಪುಣೆ: ಮಹಾರಾಷ್ಟ್ರದ ಪುಣೆ ಬಳಿ ಹೆಲಿಕಾಪ್ಟರ್ ಪತನವಾಗಿರುವ ಘಟನೆ ನಡೆದಿದೆ. ಹೆಲಿಕಾಪ್ಟರ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ತೀವ್ರ ಮಳೆ, ಗಾಳಿ ಬೀಸುತ್ತಿದ್ದ ಕಾರಣ ಹವಾಮಾನ ವೈಫಲ್ಯದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಹೇಳಲಾಗಿದೆ.
ಮುಂಬೈನ ಜುಹುವಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಇದಾಗಿದ್ದು, ಪುಣೆ ಬಳಿ ಪತನಗೊಂಡಿದೆ. ಇತ್ತೀಚಿನ ಮಾಹಿತಿ ಪ್ರಕಾರ ಕ್ಯಾಪ್ಟನ್ ಆನಂದ್ ಎಂಬುವವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.