ಮುಂಬೈ: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಮಹಾರಾಷ್ಟ್ರ ಕೋರ್ಟ್ 5 ವರ್ಷ ಜೈಲು ಶಿಕ್ಷೆ ನೀಡಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ವಿಶೇಷ ನ್ಯಾಯಾಲಯ 2016 ರಲ್ಲಿ 11 ಮತ್ತು 9 ನೇ ವರ್ಷ ವಯಸ್ಸಿನ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ 29 ವರ್ಷದ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಾಸಿಕ್ಯೂಷನ್ ಪ್ರಕಾರ, ಶಿಕ್ಷಕ ಸಹೋದರಿಯರನ್ನು ಚುಂಬಿಸಿ ಅನುಚಿತವಾಗಿ ವರ್ತಿಸಿದ ಬಗ್ಗೆ ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದರು. ಅಲ್ಲದೆ, ಶಿಕ್ಷಕನ ಕಿರುಕುಳದಿಂದಾಗಿ ಮದರಸಾಗೆ ಹೋಗಲು ನಿರಾಕರಿಸಿದ್ದರು.
ನಂತರದಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ 60 ದಿನದೊಳಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ವಿಫಲವಾಗಿದ್ದ ಕಾರಣ ಶಿಕ್ಷಕನಿಗೆ ಜಾಮೀನು ನೀಡಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಶಿಕ್ಷಕನ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸಿತು. ಸಾಕ್ಷ್ಯ ಆಧಾರದ ಮೇಲೆ ಶಿಕ್ಷಕನಿಗೆ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.