ಕೊರೊನಾ ಎರಡನೇ ಅಲೆ ನಂತ್ರ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೀರ್ಘ ಕಾಲದಿಂದ ಮುಚ್ಚಲ್ಪಟ್ಟಿದ ಧಾರ್ಮಿಕ ಸ್ಥಳಗಳನ್ನು ಅಕ್ಟೋಬರ್ 7 ರಿಂದ ತೆರೆಯಲು ಒಪ್ಪಿಗೆ ನೀಡಿದೆ. ಹಬ್ಬಗಳು ಆರಂಭವಾಗುತ್ತಿದ್ದು, ನವರಾತ್ರಿ ಮೊದಲು ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಕೇಂದ್ರಗಳ ಬಾಗಿಲು ತೆರೆಯಲಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ರಾಜ್ಯದ ಎಲ್ಲಾ ಧಾರ್ಮಿಕ ಸ್ಥಳಗಳು ಅಕ್ಟೋಬರ್ 7 ರಿಂದ ತೆರೆಯಲ್ಪಡುತ್ತವೆ. ಮಹಾರಾಷ್ಟ್ರ ಸರ್ಕಾರ, ಮೂರನೇ ಅಲೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಕೋವಿಡ್ -19 ಪ್ರಕರಣಗಳು ದಿನೇ ದಿನೇ ಕಡಿಮೆಯಾಗುತ್ತಿದ್ದರೂ, ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕೆಂದು ಸಿಎಂ ಮನವಿ ಮಾಡಿದ್ದಾರೆ. ಕೊರೊನಾ ಪ್ರೋಟೋಕಾಲ್ ಅನುಸರಿಸುವುದು ಕಡ್ಡಾಯವೆಂದು ಅವರು ಹೇಳಿದ್ದಾರೆ. ದೇವಾಲಯಗಳಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅಕ್ಟೋಬರ್ 4 ರಿಂದ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದ್ದಾರೆ. ಷರತ್ತುಬದ್ಧವಾಗಿ ಶಾಲೆಗಳನ್ನು ತೆರೆಯಬೇಕೆಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಗ್ರಾಮೀಣ ಪ್ರದೇಶಗಳಲ್ಲಿ 5-12 ತರಗತಿಗೆ, ಪಟ್ಟಣಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲಿ 8-12 ತರಗತಿ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳನ್ನು ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿವೆ. ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನಡೆಯುತ್ತಿದೆ. ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುವುದು, ಪೋಷಕರಿಗೆ ಬಿಟ್ಟಿದ್ದು ಎಂದು ಸರ್ಕಾರ ಹೇಳಿದೆ.