ಮುಂಬೈ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಶಿವಸೇನೆ ಉದ್ಧಟತನದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸಚಿವರೊಬ್ಬರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.
ಕರ್ನಾಟಕಕ್ಕೆ ಶಿವಸೈನಿಕರು ತಕ್ಕ ಪಾಠ ಕಲಿಸಲಿದ್ದಾರೆ. ಶಿವಸೇನೆ ಕಾನೂನು ಕೈಗೆತ್ತಿಕೊಂಡರೆ ಅದಕ್ಕೆ ಕರ್ನಾಟಕ ಸರ್ಕಾರವೇ ನೇರ ಹೊಣೆಯಾಗಲಿದೆ. ನಮ್ಮ ಕಾರ್ಯಕರ್ತರು ಸುಮ್ಮನಿರುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ಏಕನಾಥ ಶಿಂಧೆ ತಿಳಿಸಿದ್ದಾರೆ.
BIG BREAKING: ಒಮಿಕ್ರಾನ್ ಆತಂಕದ ನಡುವೆ ಒಂದೇ ದಿನ 7,081 ಜನರಲ್ಲಿ ಕೋವಿಡ್ ಪಾಸಿಟಿವ್; ದೇಶದಲ್ಲಿದೆ 83,913 ಕೋವಿಡ್ ಸಕ್ರಿಯ ಪ್ರಕರಣ
ಬೆಳಗಾವಿ ಹಿಂಸಾಚಾರ ಪ್ರಕರಣದ ಬೆನ್ನಲ್ಲೇ ಮಾತನಾಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ಎಂಇಎಸ್ ನಶಿಸಿ ಹೋಗುವ ಕಾಲ ಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಏಕನಾಥ್ ಶಿಂಧೆ, ಒಂದು ವೇಳೆ ಕಾನೂನು ಕ್ರಮಕ್ಕೆ ಮುಂದಾದರೆ ಕರ್ನಾಟಕ ಸರ್ಕಾರವೇ ಇರುವುದಿಲ್ಲ. ಶಿವಸೇನೆ ತಕ್ಕ ಪಾಠ ಕಲಿಸಲಿದೆ ಎಂದು ಬೆದರಿಕೆಯೊಡ್ಡಿದ್ದಾರೆ.