alex Certify ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆ, ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ : CM ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆ, ರಾಯಚೂರು ವಿವಿಗೆ ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ : CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯ ಪ್ರಯುಕ್ತ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ವಾಲ್ಮೀಕಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಹೆಸರು ನಾಮಕರಣ ಮಾಡಲಾಗುವುದು ಎಂದು ಇಂದು ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಘೋಷಿಸಿದೆ. ಪರಿಶ್ರಮದ ಮೂಲಕ ಸಾಧನೆಯ ಶಿಖರವನ್ನೇರಿದ ವಾಲ್ಮೀಕಿಯವರ ಹೆಸರು ಮತ್ತು ಬದುಕು ಅಜರಾಮರವಾಗಲಿ ಎಂಬುದು ನನ್ನ ಉದ್ದೇಶವಾಗಿದೆ ಎಂದರು.ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ವಿಜೇತ ಸಾಧಕರುಗಳಾದ ಕಿಲಾರಿ ಜೋಗಯ್ಯ, ಡಾ.ರತ್ನಮ್ಮ .ಎಸ್, ರಾಜಶೇಖರ ತಳವಾರ, ಕೆ. ಎಸ್. ಮೃತ್ಯುಂಜಯ ಹಾಗೂ ಶ್ರೀಮತಿ ರತ್ನಮ್ಮ ಬಿ. ಸೋಗಿ ಅವರಿಗೆ ಅಭಿನಂದನೆಗಳು. ನಿಮ್ಮ ಜೀವನ ಸಾಧನೆ ಸಮಾಜಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...