alex Certify BREAKING: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶರಾಗಿದ್ದಾರೆ. 89 ವರ್ಷದ ಅರುಣ್ ಗಾಂಧಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅರುಣ್ ಗಾಂಧಿ ಇಂದು ಬೆಳಿಗ್ಗೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅರುಣ್ ಗಾಂಧಿಯವರ ಅಂತ್ಯ ಸಂಸ್ಕಾರ ಕೊಲ್ಲಾಪುರದಲ್ಲಿ ಇಂದೇ ನಡೆಯಲಿದೆ ಎಂದು ಅವರ ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರ ಪುತ್ರ ಮಣಿಲಾಲ್ ಗಾಂಧಿ ಹಾಗೂ ಸುಶೀಲ ದಂಪತಿಯ ಪುತ್ರನಾಗಿ ಏಪ್ರಿಲ್ 14, 1934 ರಲ್ಲಿ ದಕ್ಷಿಣ ಆಫ್ರಿಕಾದ ಡರ್ಬಾನ್ ನಲ್ಲಿ ಅರುಣ್ ಗಾಂಧಿ ಜನಿಸಿದ್ದರು. ತಮ್ಮ ತಾತ ಮಹಾತ್ಮ ಗಾಂಧಿಯವರ ಹಾದಿಯಲ್ಲಿ ನಡೆದಿದ್ದ ಅರುಣ್ ಗಾಂಧಿ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...