
ಟೀಮ್ ಇಂಡಿಯಾ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಇಂದು ತಮ್ಮ 42 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು. ಅವರ ಹೆಲಿಕಾಪ್ಟರ್ ಶಾಟ್ ಅನ್ನು ಕ್ರಿಕೆಟ್ ಪ್ರೇಮಿಗಳು ಈಗಲೂ ನೆನಪಿಸಿಕೊಳ್ಳುತ್ತಾರೆ.
ಎಂ.ಎಸ್. ಧೋನಿ, ಟಿ ಟ್ವೆಂಟಿ ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟಿರುವ ಯಶಸ್ವಿ ನಾಯಕರಾಗಿದ್ದಾರೆ. ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಕ್ರಿಕೆಟಿಗರು, ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಮಹೇಂದ್ರ ಸಿಂಗ್ ಧೋನಿ ಅವರಿಗೆ ಶುಭ ಕೋರಿದ್ದಾರೆ.
ಧೋನಿ ಕ್ರಿಕೆಟ್ ನಲ್ಲಿ ತೆಗೆದುಕೊಳ್ಳುವ ನಿರ್ಧಾರ ಹಾಗೂ ಅವರು ಕೊಡುವ ಸಲಹೆಗಳು ಯುವ ಕ್ರಿಕೆಟಿಗರಿಗೆ ಸ್ಪೂರ್ತಿಯಾಗಿತ್ತು. ಅವರ ಅಭಿಮಾನಿಗಳೊಂದಿಗೆ ಕಳೆದ ಫನ್ನಿ ಕ್ಷಣಗಳು ಹಾಗೂ ಭಾವುಕ ಕ್ಷಣಗಳನ್ನು ಈ ಹಿಂದೆ ಯೂಟ್ಯೂಬ್ ನಲ್ಲಿ ಹಾಕಿದ್ದು, ಇಲ್ಲಿ ಈ ವಿಡಿಯೋವನ್ನು ನೋಡಬಹುದಾಗಿದೆ.
https://youtu.be/v0hAg1x6kCM