ಹಾವೇರಿ: ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ 13 ರವರೆಗೆ ಹಾವೇರಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಈ ಬಗ್ಗೆ ಮಾಹಿತಿ ನೀಡಿದ್ದು, ಹಾವೇರಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಮೊದಲ ನಿಘಂಟು ತಜ್ಞ ಫರ್ಡಿನೆಂಟ್ ಕಿಟೆಲ್ ಅವರ ಮೊಮ್ಮಗಳು ಹಾಗೂ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಭಾಗವಹಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಿದರು.