ಚೆನ್ನೈ : ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.
ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ.ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.