)
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ ಬಂಧಿಸಿದೆ.
ಈ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಹಲವರ ಬಂಧನವಾಗಿದ್ದು, ಮುಸ್ತಫಾ ಬಂಧನಕ್ಕಾಗಿ ರಾಷ್ಟ್ರೀಯ ತನಿಖಾ ತಂಡ ಬಲೆ ಬೀಸಿತ್ತು. ಅಲ್ಲದೆ ಈತನ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇದೀಗ ಸಕಲೇಶಪುರದಲ್ಲಿ ಆತನ ಬಂಧನವಾಗಿದೆ.
ಏನಿದು ಪ್ರಕರಣ ?
ಪ್ರವೀಣ್ ನೆಟ್ಟಾರು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಅಕ್ಷಯ ಫ್ರೆಶ್ ಚಿಕನ್ ಫಾರ್ಮ್ ಶಾಪ್ ಹೊಂದಿದ್ದು, 2022ರ ಜುಲೈ 26ರಂದು ರಾತ್ರಿ 8.30 ರ ಸುಮಾರಿಗೆ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದರು. ಮೊದಲಿಗೆ ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ಬಳಿಕ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಗೆ ವಹಿಸಲಾಗಿತ್ತು.