ಡೆಹ್ರಾಡೂನ್: ಭೀಕರ ರಸ್ತೆ ಅಪಘಾತದಲ್ಲಿ ಯುಟಿಲಿಟಿ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಸಂಭವಿಸಿದೆ.
ಡೆಹ್ರಾಡೂನ್ ನ ಚಕ್ರತಾ ಪ್ರದೇಶದ ಬುಲ್ಹಾದ್-ಬೈಲಾ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಲಾ ಗ್ರಾಮದಿಂದ ವಿಕಾಸನಗರಕ್ಕೆ ಹೋಗುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. 16 ಜನರು ಯುಟಿಲಿಟಿ ವಾಹನದಲ್ಲಿದ್ದರು. ಘಟನೆಯಲ್ಲಿ 13 ಜನರು ಸಾವನ್ನಪ್ಪಿದ್ದು, 3 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸತತ 5 ನೇ ಬಾರಿ ದರ ಏರಿಕೆ ನಂತರ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆ
ಸ್ಥಳಕ್ಕೆ ಎಸ್ ಡಿ ಆರ್ ಎಫ್ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ದುರ್ಗಮ ಪ್ರದೇಶವಾದ್ದರಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ.