ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಸಾಂಕ್ರಾಮಿಕ ರೋಗದ ಅವಧಿಯಲ್ಲಿ ಪೋಷಕರು ತಮ್ಮ ಮಕ್ಕಳ ಸಂಪೂರ್ಣ ಶಾಲಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ವಿದ್ಯಾಭವನ ಸೊಸೈಟಿ, ಸವಾಯ್ ಮಾನಸಿಂಗ್ ವಿದ್ಯಾಲಯ, ಗಾಂಧಿ ಸೇವಾಸದನ, ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆದಿದೆ. ಈ ವೇಳೆ 2019 -20 ರಲ್ಲಿ ಪಾವತಿಸಿದ ಶುಲ್ಕವನ್ನು ಕಟ್ಟಬೇಕೆಂದು ಮಧ್ಯಂತರ ಆದೇಶ ನೀಡಲಾಗಿದೆ.
ಈ ಖಾಸಗಿ ಶಾಲೆಗಳು 2016 ರ ಶುಲ್ಕ ನಿಯಂತ್ರಣ ಕಾನೂನು ಪ್ರಶ್ನಿಸಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಪೋಷಕರು 2021ರ ಮಾರ್ಚ್ 5 ರಿಂದ 6 ಕಂತುಗಳಲ್ಲಿ ಶುಲ್ಕ ಪಾವತಿಸಬಹುದು. ಶಾಲೆಗಳು ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಬಾರದು. ಅವರ ಹೆಸರನ್ನು ತೆಗೆದು ಹಾಕಬಾರದು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.