ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇರುವ ಹುದ್ದೆಯಲ್ಲಿ ಅಪರಾಧ ತನಿಖಾ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಮಿಥುನ್ ಎಚ್.ಎನ್, ಐಪಿಎಸ್ (ಕೆಎನ್ -2020) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವೈರ್ಲೆಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ರೋಹನ್ ಜಗದೀಶ್, ಐಪಿಎಸ್ ಅವರನ್ನು ಮುಂದಿನ ಆದೇಶದವರೆಗೆ ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ) ನೇಮಿಸಲಾಗಿದೆ.
ಅದೇ ರೀತಿ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇರುವ ಹುದ್ದೆಯಲ್ಲಿ ಗುಪ್ತಚರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಒಟ್ಟಾರೆಯಾಗಿ 10 ಮಂದಿ IPS ಅಧಿಕಾರಿ’ಗಳನ್ನು ವಿವಿಧ ಸ್ಥಳಗಳಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.