ಶಬರಿಮಲೆ: ಕೇರಳದ ಶ್ರೀ ಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಮಾಲಾಧಾರಿಗಳಾಗಿ ತೆರಳಿದ್ದ ಲಕ್ಷಾಂತರ ಅಯ್ಯಪ್ಪಸ್ವಾಮಿ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ.
ಕಲಿಯುಗದ ದೈವ ಅಯ್ಯಪ್ಪ ಸ್ವಾಮಿ ಜ್ಯೋತಿ ಸ್ವರೂಪದಲ್ಲಿ ದರ್ಶನ ನೀಡಿದ್ದು, ಜ್ಯೋತಿ ಕಾಣಿಸುತ್ತಿದಂತೆ ಭಕ್ತರಿಂದ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮೊಳಗಿದೆ. ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಸಲ ಮಕರ ಜ್ಯೋತಿ ದರ್ಶನವಾಗಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗುತ್ತದೆ. ಅಂತೆಯೇ ಈ ಬಾರಿಯೂ ಜ್ಯೋತಿ ದರ್ಶನವಾಗಿದೆ.
ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ಗೋಚರಿಸಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡು ಭಾವಪರವಶರಾಗಿದ್ದಾರೆ. ಪಂದಳದಿಂದ ಅಯ್ಯಪ್ಪಸ್ವಾಮಿ ಸನ್ನಿಧಿಗೆ ಆಭರಣ ತಂದು ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಗಿದೆ.