ಬೆಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾ ಪ್ರಹಾರ ಮುಂದುವರೆಸಿದ್ದು, ‘ಕಾಸಿಗಾಗಿ ಹುದ್ದೆ’ ಮತ್ತು ‘ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದ್ದಾರೆ.
ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ… ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದ್ದಾರೆ.
ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-DCM ನಿರ್ದೇಶಕ.. ಹೇಗಿದೆ?
ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ & ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದ್ದಾರೆ.