ಮುಂಬೈ: ಖ್ಯಾತ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯ ಟೆರೇಸ್ ನಿಂದ ಜಿಗಿದು ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.
ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ. ಅನಿಲ್ ಅರೋರಾ ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಾಂದ್ರಾ ಪೊಲೀಸರು ಹಾಗೂ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.