alex Certify BIG NEWS: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ: ಖ್ಯಾತ ನಟ ಬೈಜು ಸಂತೋಷ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ: ಖ್ಯಾತ ನಟ ಬೈಜು ಸಂತೋಷ್ ಅರೆಸ್ಟ್

ತಿರುವನಂತಪುರಂ: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಳಂ ಖ್ಯಾತ ನಟ ಬೈಜು ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ತಡರಾತ್ರಿ ನಟ ಬೈಜು ಸಂತೋಷ್ ಓಡಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಬೈಜು ಸಂತೋಷ್ ಅವರನ್ನು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬಳಿಕ ಬೈಜು ಅವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...