ಮಲಯಾಳಿ ನಟ ಶರತ್ ಚಂದ್ರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆನ್ನಲಾಗಿದ್ದು, ಇದಕ್ಕೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ನಲ್ಲಿ ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಿದ್ದಾರೆ.
37 ವರ್ಷದ ನಟ ಅಂಗಮಾಲಿ ಡೈರೀಸ್, ಒರು ಮೆಕ್ಸಿಕನ್ ಅಪರಾಧ, ಸಿಐಎ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದು, ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದರು.
ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.